

ಬೀದರ್: ಕಾಂಗ್ರೆಸ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೂತನ ಸಂಸದರು ಹಾಗೂ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳ ಸಭೆಯಲ್ಲಿ ಬೀದರ ನೂತನ ಸಂಸದ ಸಾಗರ್ ಈಶ್ವರ ಖಂಡ್ರೆ ಅವರು ಭಾಗವಹಿಸಿದರು.
ರಾಜ್ಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದೆ ಕೈಗೊಳ್ಳಬೇಕಿರುವ ನಿರ್ಣಯಗಳ ಕುರಿತು ರಾಹುಲ್ ಗಾಂಧಿ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.