

ಬೀದರ್: ಎರಡನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಎನ್. ರವಿಕುಮಾರ ಅವರನ್ನು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಾದ ಜಗನ್ನಾಥ ಭವನದಲ್ಲಿ ಶುಕ್ರವಾರ ಬೀದರ್ ಜಿಲ್ಲೆಯ ಬಿಜೆಪಿ ಮುಖಂಡರು ಸನ್ಮಾನಿಸಿದರು.
ಶಾಸಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬು ವಾಲಿ ಇತರರಿದ್ದರು.