ಬ್ರಿಮ್ಸ್ ಗುತ್ತಿಗೆ ನೌಕರರ ಸಂಘಕ್ಕೆ ಆಯ್ಕೆ

Ambarish Batanapure - Copy
Published on

ಬೀದರ್: ಇಲ್ಲಿಯ ಬ್ರಿಮ್ಸ್ ಬೋಧಕ ಆಸ್ಪತ್ರೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ವಿವಿಧ ಹುದ್ದೆಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ನಗರದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪದಾಧಿಕಾರಿಗಳು: ಅಂಬರೀಷ್ ಬಟನಾಪುರೆ (ಉಪಾಧ್ಯಕ್ಷ), ಹರೀಶ್ (ಕಾರ್ಯದರ್ಶಿ), ರವಿಕಾಂತ (ಖಜಾಂಚಿ), ಶಾಂತಮ್ಮ ಘಾಳೆಪ್ಪ, ವಸಂತ, ಶಾಂತಮ್ಮ ಮಾರುತಿ, ದ್ರೌಪದಿ, ಸಂಗೀತಾ ಮತ್ತು ರೇಣುಕಾ ಸೂರ್ಯಕಾಂತ (ನಿರ್ದೇಶಕರು).
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಹಾಗೂ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಹಾಗೂ ಬ್ರಿಮ್ಸ್ ಬೋಧಕ ಆಸ್ಪತ್ರೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮುಜಾಹಿದ್ ಪಾಶಾ ಸಭೆಯ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net