ಹಾಸ್ಟೆಲ್ ಗಳಿಗೆ ಕಾವಲುಗಾರರ ನೇಮಿಸಿ

Vijaykumar Sonare
Published on

ಬೀದರ್: ಬೀದರ್ ಸೇರಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ, ಹಿಂದುಳಿದಳ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿ ನಡೆಯುತ್ತಿರುವ ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ರಾತ್ರಿ ಮತ್ತು ಹಗಲಿನಲ್ಲಿ ಕಾವಲುಗಾರರನ್ನು ನೇಮಕ ಮಾಡಬೇಕು ಎಂದು ಕಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ ಆಗ್ರಹಿಸಿದ್ದಾರೆ.
ಸಿಎಂಗೆ ಪತ್ರ ಬರೆದಿರುವ ಅವರು, ವಸತಿ ನಿಲಯಗಳಲ್ಲಿ ಕಾವಲುಗಾರರು ಇಲ್ಲದ ಕಾರಣ ವಿದ್ಯಾರ್ಥಿಗಳು ರಾತ್ರಿ ವೇಳೆ ಹೊರಗಡೆ ಹೋಗುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಸ್ಥಳೀಯ ಜನವಸತಿ ನಿಲಯಗಳಲ್ಲಿ ರಾತ್ರಿ ವೇಳೆ ಮದ್ಯ ಸೇವನೆ ಮಾಡುತ್ತಿದ್ದರಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ. ಸರ್ಕಾರ ಈ ವಿಷಯವನ್ನು ಗಂಭೀರ ಪರಿಗಣಿಸಿ ಎಲ್ಲ ವಸತಿ ನಿಲಯಗಳಿಗೆ ಕಾವಲುಗಾರರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net