ಸುಳ್ಳು ಜಾತಿ ಪ್ರಮಾಣ ಪತ್ರ, ಕ್ರಮಕ್ಕೆ ಒತ್ತಾಯ

Shankar Jantikar
Published on

ಬೀದರ್: ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಪರಿಶಿಷ್ಟರ ಸೌಲಭ್ಯ ಕಬಳಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ವಕ್ತಾರ ಶಂಕರ ಜ್ಯಾಂತಿಕರ್ ಒತ್ತಾಯಿಸಿದ್ದಾರೆ.
ಮೇಲ್ವರ್ಗದ ಅನೇಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸುಳ್ಳು ಪ್ರಮಾಣ ಪತ್ರ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅರ್ಹರು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದ್ದಾರೆ.
ಸರ್ಕಾರಿ ಹುದ್ದೆಗಳ ನೇಮಕ, ಸಾಲ, ಶಿಕ್ಷಣ ಮೊದಲಾದ ಉದ್ದೇಶಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣ ಪತ್ರಗಳ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಪರಿಶಿಷ್ಟರ ಅನುದಾನ ಹಾಗೂ ಮೀಸಲಾತಿಯನ್ನು ಬೇರೆ ಸಮುದಾಯಗಳು ಬಳಸಿಕೊಳ್ಳದ ರೀತಿಯಲ್ಲಿ ಕಾನೂನು ರೂಪಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net