

ಬೀದರ್: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಜೆಡಿಎಸ್ ನಿಂದ ನಗರದಲ್ಲಿ ವಿಜಯೋತ್ಸವ ನಡೆಯಿತು.
ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಮುಖಂಡರು, ಕಾರ್ಯಕರ್ತರು ಸಂಭ್ರಮಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಕೊಡಗೆ ಮಾತನಾಡಿ, ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಅಕಾರ ಸ್ವೀಕರಿಸಿದ್ದರಿಂದ ಜೆಡಿಎಸ್ ಗೆ ಆನೆಬಲ ಬಂದಿದೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಪಕ್ಷದ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಅಭಿ ಕಾಳೆ, ನಗರಸಭೆ ಸದಸ್ಯ ರಾಜು ಚಿಂತಾಮಣಿ, ಪ್ರಮುಖರಾದ ಬೊಮ್ಮಗೊಂಡ ಚಿಟ್ಟಾವಾಡಿ, ಚಿಕನ್ ಸಲೀಂ, ಬಸವರಾಜ ಶಹಾಪುರ, ರೇವಣಸಿದ್ದಪ್ಪ ಬಾವಗಿ ಸಿರಕಟನಳ್ಳಿ, ಶಂಕರ ಗಾದಗಿ, ಶಿವರಾಜ ಬರೂರ, ಶಿವರಾಜ ವಗ್ಗೆ ಇತರರಿದ್ದರು.