ರಿಯಾಯಿತಿ ದರದಲ್ಲಿ ಬೀಜ ವಿತರಣೆ

bij vitarane
Published on

ಬೀದರ್: ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಕೃಷಿಕರಿಗೆ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.
ನೌಬಾದ್ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ವಿತರಣೆಗೆ ಚಾಲನೆ ನೀಡಿದ ಅವರು, ಮುಂಗಾರಿನಲ್ಲಿ ಬಿತ್ತನೆ ಮಾಡುವ ಸೋಯಾಬೀನ್, ತೊಗರಿ, ಉದ್ದು, ಹೆಸರು ಮೊದಲಾದ ಬೆಳೆಗಳ ಬೀಜ ವಿತರಿಸಲಾಗುತ್ತಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.
ರೈತರಿಗೆ ಗುಣಮಟ್ಟದ ಅಗತ್ಯ ಬೀಜಗಳನ್ನು ಸರಿಯಾದ ಸಮಯಕ್ಕೆ ವಿತರಿಸಬೇಕು. ಬೀಜ ಸಂಗ್ರಹಿಸಿಡಬೇಕು. ಯಾವುದೇ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಮುಂಗಾರು ಹಂಗಾಮಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಕೃಷಿಕರೊಂದಿಗೆ ಸೌಜನ್ಯದೊಂದಿಗೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡಲಾದ ಬೀಜಗಳು ಹಾಗೂ ಅವುಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳಿಂದ ಸಿಇಒ ಮಾಹಿತಿ ಪಡೆದರು.
ಕೃಷ ಇಲಾಖೆಯ ಡಿಡಿಎ ರಾಘವೇಂದ್ರ, ಎಡಿಎ ಮಚೇಂದ್ರ ವಡ್ಡಿ, ಬೀದರ್ ಉತ್ತರ ಕೃಷಿ ಅಧಿಕಾರಿ ವಷರ್ಾ ಗಾಯತೊಂಡೆ, ಶತ್ರುಘ್ನ, ಬಸವರಾಜ ಹಾಗೂ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ, ರೈತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net