

ಬೀದರ್: ಪ್ರಸಕ್ತ (2024-25) ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಕುರಿತು ರೈತರಿಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರಡ್ಡಿ ಕೃಷಿ ಇಲಾಖೆ ಅಧಿಕಾರಿಳಿಗೆ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಹಾಗೂ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಭೆಯಲ್ಲಿ ಮಾತನಾಡಿ, ಹಾನಿಗೊಳಗಾದ ರೈತರಿಗೆ ಸರಿಯಾದ ರೀತಿಯಲ್ಲಿ ಬೆಳೆ ಪರಿಹಾರ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ಸೂಪರ್ವೈಸರ್, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ವಿಮಾ ಕಂಪನಿ ಪ್ರತಿನಿಧಿಗಳು ರೈತರ ಸರ್ವೇ ನಂಬರ್, ಹಾನಿಗೊಳಗಾದ ಪ್ರದೇಶ ಛಾಯಾಚಿತ್ರ, ಬೆಳೆ ಮಾಹಿತಿಯನ್ನು ನಮೂನೆ-1 ಮತ್ತು 2ರಲ್ಲಿ ಸರಿಯಾಗಿ ನಮೂದಿಸಬೇಕು. ರೈತರಿಂದ ಯಾವುದೇ ತರಹದ ದೂರು ಬರದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಜಂಟಿ ಕೃಷಿ ನಿರ್ದೇಶಕ ಡಾ.ರಿತೇಂದ್ರನಾಥ ಸುಗೂರ, ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುವರ್ಣಾ, ತೋಟಗಾರಿಕೆ ಉಪ ನಿರ್ದೇಶಕ ವಿಶ್ವನಾಥ ಝಿಳ್ಳೆ ಇತರರಿದ್ದರು.