ಯೋಗ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ

oplus_2
oplus_2
Published on

ಬೀದರ್: ಜೂ.21ರಂದು 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ನಗರದ ನೆಹರು ಕ್ರೀಡಾಂಗಣದಲ್ಲಿ ಅಂದು ಬೆಳಗ್ಗೆ 6.30ಕ್ಕೆ ಎಲ್ಲರೂ ಹಾಜರಾಗಬೇಕು. ಯೋಗ ಪ್ರದರ್ಶನ 7.15ರಿಂದ 8ರವರೆಗೆ ನಡೆಯಲಿದೆ. ಪೂರ್ವಭಾವಿಯಾಗಿ ಅಗತ್ಯ ಸಿದ್ಧತೆ ಪೂರ್ಣಗೊಳಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಸರ್ಕಾರೇತರ ಸಂಘ-ಸಂಸ್ಥೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮ ವಹಿಸಬೇಕು. ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು. ಬಹುತೇಕ ಎಲ್ಲರೂ ಬಿಳಿ ಬಣ್ಣದ ಟಿ ಶಟ್೯ ಧರಿಸಲು ಆದ್ಯತೆ ನೀಡಬೇಕೆಂದು ಹೇಳಿದರು.
ಆಯುಷ್ ಇಲಾಖೆ ಅಧಿಕಾರಿ ಡಾ.ಆರ್.ಬಿ. ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ, ಕ್ರೀಡಾ ಇಲಾಖೆ ಅಧಿಕಾರಿ ಡಾ.ಗೌತಮ ಅರಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net