ಕೇಂದ್ರೀಯ ವಿವಿಯಲ್ಲಿ ವೀರಶೈವ ಲಿಂಗಾಯತ ಅಧ್ಯಯನ ಪೀಠ ಸ್ಥಾಪಿಸಿ

VC Sanman - Copy
Published on

ಬೀದರ್: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವೀರಶೈವ ಲಿಂಗಾಯತ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತರೂ ಆದ ಕೇಂದ್ರ ಸರ್ಕಾರದ ಸಾಂಸ್ಥಿಕ ಪ್ರಾಣಿ ನೀತಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಆಗ್ರಹಿಸಿದರು.
ಕಲಬುರಗಿಯಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರನ್ನು ಬುಧವಾರ ಭೇಟಿ ಮಾಡಿ ಸತ್ಕರಿಸಿ, ಈ ಕುರಿತು ಬೇಡಿಕೆ ಮಂಡಿಸಿದರು.
ಇಂದು ಭಾರತವೂ ಸೇರಿದಂತೆ ವಿಶ್ವದ ಎಲ್ಲೆಡೆ ವೀರಶೈವ ಲಿಂಗಾಯತ ಸಾಹಿತ್ಯ ಹಾಗೂ ಶಾಸನಗಳು ದೊರೆಯುತ್ತಿವೆ. ಹೀಗಾಗಿ ವೀರಶೈವ ಲಿಂಗಾಯತದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನಕ್ಕಾಗಿ ಪೀಠ ಸ್ಥಾಪಿಸುವ ಅಗತ್ಯ ಇದೆ ಎಂದು ಮನವರಿಕೆ ಮಾಡಿದರು.
ಪಂಚ ಪೀಠಗಳು ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿವೆ. ಮನುಕುಲಕ್ಕೆ ಪೀಠಗಳ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.
ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಆಗಬೇಕು ಎಂಬುದು ಪಂಚ ಪೀಠಗಳ ಜಗದ್ಗುರು ಹಾಗೂ ಸಮಾಜದ ಬಹು ದಿನಗಳ ಬೇಡಿಕೆಯಾಗಿದೆ. ಹೀಗಾಗಿ ವಿಶ್ವವಿದ್ಯಾಲಯದ ಕಾರ್ಯಕಾರಿಣಿ ಸಮಿತಿಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.
ಭರವಸೆ: ತಮ್ಮ ಮನವಿ ಮೇರೆಗೆ ಅಧ್ಯಯನ ಪೀಠ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕುಲಪತಿ ಭರವಸೆ ನೀಡಿದ್ದಾರೆ ಎಂದು ಶಿವಯ್ಯ ಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net