

ಬೀದರ್: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಎನ್ಎಸ್.ಯುಐ ಘಟಕದ ಅಧ್ಯಕ್ಷ ಇಮ್ರಾನ್ ಖಾನ್ ಕಪಲಾಪುರ ಆಗ್ರಹಿಸಿದ್ದಾರೆ.
67 ಅಭ್ಯರ್ಥಿಗಳು ನೀಟ್ ಪರೀಕ್ಷೆಯಲ್ಲಿ 720ಕ್ಕೆ 720 ಅಂಕ ಗಳಿಸಿದ್ದಾರೆ. ಹಿಂದಿನ ವರ್ಷಗಳ ಟಾಪರ್ ಗಳ ಸಂಖ್ಯೆಗೆ ಹೋಲಿಸಿದರೆ ಈ ವರ್ಷದ ಫಲಿತಾಂಶವು ಅನುಮಾನ ಬರುತ್ತಿದೆ. ನೀಟ್ ನಲ್ಲಿ ಭಾರಿ ಅಕ್ರಮ ನಡೆದಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.