ಪಾರದರ್ಶಕ ನೀಟ್, ಕೇಂದ್ರ ವಿಫಲ

Shankar Jantikar-2 - Copy
Published on

ಬೀದರ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಕೇಂದ್ರದ ಎನ್‍ಡಿಎ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ವಕ್ತಾರ ಶಂಕರ ಜ್ಯಾಂತಿಕರ್ ಆರೋಪಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆಯು ಪರೀಕ್ಷೆ ಬರೆದ ದೇಶದ 24 ಲಕ್ಷ ವಿದ್ಯಾರ್ಥಿಗಳಿಗೆ ಆಘಾತ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಎನ್‍ಡಿಎ ಅವಧಿಯಲ್ಲಿ ವಿವಿಧ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪಗಳು ಕೇಳಿ ಬಂದಿವೆ. ಇದೀಗ ನೀಟ್ ವಿಶ್ವಾಸಾರ್ಹತೆಗೂ ಕುತ್ತು ಬಂದಿದೆ. ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುವುದನ್ನು ಸಹಿಸಲಾಗದು ಎಂದು ಎಚ್ಚರಿಸಿದ್ದಾರೆ.
ಸ್ವಾಗತ: ರಾಜ್ಯದ ಎಲ್ಲ ಸರ್ಕಾರಿ ಕಚೇರಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಶಾಲಾ, ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲ ಸಮಾರಂಭಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದ ಜತೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಡುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಸ್ವಾಗತಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net