ಕಲಾವಿದರಿಗೆ ಮಾಸಾಶನ ಸದನದಲ್ಲಿ ಚರ್ಚಿಸಿ

Vijaykumar Sonare Photo- 1
Published on

ಬೀದರ್: ಕಲಾವಿದರಿಗೆ ಮಾಸಿಕ 10 ಸಾವಿರ ರೂ. ಮಾಸಾಶನ ಮಂಜೂರು ಮಾಡಬೇಕು ಹಾಗೂ ಪದ್ಮಶ್ರೀ ಪ್ರಶಸ್ತಿ ಪಡೆಯುವವವರಿಗೆ ಪ್ರಶಸ್ತಿ ಜತೆಗೆ 10 ಲಕ್ಷ ರೂ. ನಗದು ಬಹುಮಾನವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು. ಈ ಬಗ್ಗೆ ಸಂಸತ್ನಲ್ಲಿ ಚರ್ಚೆ ಮಾಡಬೇಕು ಎಂದು ಕಲ್ಯಾಣ ಕನರ್ಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ ಆಗ್ರಹಿಸಿದ್ದರೆ.
ಈ ಕುರಿತು ಬೀದರ್ ಕ್ಷೇತ್ರದ ನೂತನ ಸಂಸದ ಸಾಗರ್ ಖಂಡ್ರೆ ಅವರಿಗೆ ಪತ್ರ ಬರೆದು, 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಬೇಡಿಕೆ ಬಗ್ಗೆ ವಿಷಯ ಪ್ರಸ್ತಾಪಿಸಿ ಚಚರ್ೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಹತ್ತು ಸಾವಿರ ರೂ. ಮಾಸಿಕ ಮಾಸಾಶನ ನೀಡಿದರೆ ಕಲಾವಿದರ ಕಲೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಜತೆಗೆ 5 ಲಕ್ಷ ರೂ. ನಗದು, 2 ತೊಲೆ ಬಂಗಾರ ನೀಡುತ್ತಿದೆ. ಕೇಂದ್ರ ಸರ್ಕಾರ ಸಹ ಇದೇ ಮಾದರಿಯಲ್ಲಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಜತೆಗೆ 10 ಲಕ್ಷ ರೂ. ನಗದು ಬಹುಮಾನ ನೀಡಬೇಕು. ಈ ಕುರಿತು ಸದನದ ಗಮನ ಸೆಳೆಯಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net