ಸೈಕಲ್ ಯೋಜನೆ ಮುಂದುವರಿಸಿ

ARUN KODGE
Published on

ಬೀದರ್: ಕಳೆದ ನಾಲ್ಕು ವರ್ಷದಿಂದ ಸ್ಥಗಿತಗೊಂಡಿರುವ ಉಚಿತ ಸೈಕಲ್ ಯೋಜನೆಯನ್ನು ಮುಂದುವರಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾಧ್ಯಕ್ಷ ಅರುಣ ಕೊಡಗೆ ಆಗ್ರಹಿಸಿದ್ದಾರೆ. ಈ ಕುರಿತು ಸಿಎಂ ಅವರಿಗೆ ಪತ್ರ ಬರೆದು, ವಿದ್ಯಾಭ್ಯಾಸಕ್ಕಾಗಿ ಅನುಕೂಲ ಮತ್ತು ಶಿಕ್ಷಣದಿಂದ ದೂರ ಉಳಿದ ಮಕ್ಕಳನ್ನು ಶಾಲೆಯತ್ತ ಸೆಳೆಯುವ ಉದ್ದೇಶದಿಂದ ಜಾರಿಗೆ ತಂದ ಉಚಿತ ಸೈಕಲ್ ನೀಡುವ ಯೋಜನೆಯನ್ನು ನಿಲ್ಲಿಸಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸೈಕಲ್ಗಳಿಂದ ವಂಚಿತರಾಗಿದ್ದಾರೆ. ಈ ಯೋಜನೆ ಯಾವ ಕಾರಣಕ್ಕೂ ನಿಲ್ಲಿಸದೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸೈಕಲ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net