ರಾಜ್ಯ ಔಷಧ ವ್ಯಾಪಾರಿಗಳ ಸಂಘಕ್ಕೆ ಆಯ್ಕೆ

Shivaraj Patil - Copy
Published on

ಬೀದರ್: ಕರ್ನಾಟಕ ರಾಜ್ಯ ಔಷಧ ವ್ಯಾಪಾರಿಗಳ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಬೀದರ್‍ನ ಶಿವರಾಜ ಪಾಟೀಲ ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಬಸವರಾಜ ಪಾಟೀಲ ಹಾರೂರಗೇರಿ ಆಯ್ಕೆಯಾಗಿದ್ದಾರೆ.
ಮಡಿಕೇರಿಯಲ್ಲಿ ಭಾನುವಾರ ನಡೆದ ಸಂಘದ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಶಿವರಾಜ ಪಾಟೀಲ ಅವರು ಪ್ರಸ್ತುತ ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರೆ, ಬಸವರಾಜ ಪಾಟೀಲ ಹಾರೂರಗೇರಿ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net