ಬ್ರಿಮ್ಸ್ ನೌಕರರ ವೇತನ ಪಾವತಿಸಿ

kannada sene
Published on

ಬೀದರ್: ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯ ಹೊರಗುತ್ತಿಗೆ ಡಿ ಗ್ರೂಪ್ ನೌಕರರ ವೇತನ ಪಾವತಿಸಬೇಕು ಎಂದು ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕ ಆಗ್ರಹಿಸಿದೆ.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕಳೆದ ಆರು ತಿಂಗಳುಗಳಿಂದ ಹೊರಗುತ್ತಿಗೆ ಡಿ ಗ್ರೂಪ್ ನೌಕರರ ಸಂಬಳ ನೀಡಿಲ್ಲ. ವೇತನ ಇಲ್ಲದ ಕಾರಣ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಿದೆ. ಜೀವನ ಸಾಗಿಸಲು ಹರಸಾಹಸ ಪಡಬೇಕಾಗಿದೆ ಎಂದು ತಿಳಿಸಿದ್ದಾರೆ.
ಅಲ್ಪ ವೇತನದಲ್ಲಿ ಕೆಲಸ ಮಾಡುವ ನೌಕರರ ಹೊಟ್ಟೆ ಮೇಲೆ ಹೊಡೆಯುವುದು ಯಾವ ನ್ಯಾಯ? ಹೀಗಾಗಿ ಜಿಲ್ಲಾಧಿಕಾರಿಗಳು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿ ವೇತನ ಬಿಡುಗಡೆಗೊಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವಾರದೊಳಗೆ ವೇತನ ನೀಡದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿ ಅವರಿಗೆ ಬರೆದ ಮನವಿಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಲಾಯಿತು.
ಸೇನೆ ಜಿಲ್ಲಾಧ್ಯಕ್ಷ ಸುಭಾಷ ಕೆನಡೆ, ಪ್ರಧಾನ ಕಾರ್ಯದರ್ಶಿ ಸಂತೋಷ ಚೆಟ್ಟಿ, ಉಪಾಧ್ಯಕ್ಷ ಸಚಿನ್ ಹೆಗ್ಗೆ ಇತರರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net