ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಿ

cm memo
Published on

ಬೀದರ್: ಹಳೆಯ ಪಿಂಚಣಿ ಯೋಜನೆ ಶೀಘ್ರ ಜಾರಿಗೊಳಿಸಬೇಕು ಎಂದು ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿವಂಚಿತ ನೌಕರರ ಸಂಘ ಆಗ್ರಹಿಸಿದೆ.
ನಗರದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ್ ಯರನಳ್ಳಿ ನೇತೃತ್ವದ ನಿಯೋಗ ಸಿಎಂಗೆ ಬರೆದ ಮನವಿಪತ್ರವನ್ನು ತಹಸೀಲ್ದಾರ್ ದಿಲ್ಶಾನ್ಗೆ ಸಲ್ಲಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಿಲ್ಲ. ವಿಳಂಬ ಧೋರಣೆ ಅನುಸರಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಅನುದಾನಿತ ನೌಕರರನ್ನೂ ಸರ್ಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡಿಸಬೇಕು. ಪ್ರಾಧಿಕಾರದ ವಂತಿಗೆಯನ್ನು ಆಡಳಿತ ಮಂಡಳಿ ಬದಲು ಸಕರ್ಾರ ಭರಿಸಬೇಕು. ನಿವೃತ್ತಿ ವೇತನ ಮತ್ತು ಇತರ ಸೌಲಭ್ಯಗಳಿಗೆ ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿತು.
ಸಂಘದ ಪ್ರಮುಖರಾದ ಉಮೇಶ ಪಾಟೀಲ್, ಪ್ರಹ್ಲಾದ ತಳಘಟಕರ್, ಬಳಿರಾಮ ಕುಸನಾಳೆ, ಲಕ್ಷ್ಮಣ ಪೂಜಾರಿ, ಗಣೇಶ ಬಿರಾದಾರ್, ಬಾಲಾಜಿ ಫುಲೆ, ಗೋಪಾಲ ಕುಲಕರ್ಣಿ, ಅರಶಿಯಾ ಜಮೀನ್, ಡಾ.ಹನೀಫ್, ಪರಮೇಶ್ವರ ಬಿರಾದಾರ್ ಇತರರು ನಿಯೋಗದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net