ಸಂಸದ ಖಂಡ್ರೆ ಅಭಿನಂದನಾ ಸಮಾರಂಭ 15ಕ್ಕೆ

Sagar Khandre
Published on

ಬೀದರ್: ನೂತನ ಸಂಸದ ಸಾಗರ್ ಈಶ್ವರ ಖಂಡ್ರೆ ಅವರಿಗೆ ವೀರಶೈವ ಲಿಂಗಾಯತ ಸೇವಾ ಸಮಿತಿ ವತಿಯಿಂದ ಜು.15ರಂದು ಸಂಜೆ 7ಕ್ಕೆ ನಗರದ ಪಾಪನಾಶ ದೇವಸ್ಥಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ದೇಶದ ಅತ್ಯಂತ ಕಿರಿಯ ವಯಸ್ಸಿನ ಸಂಸದರಲ್ಲಿ ಸಾಗರ್ ಒಬ್ಬರು. ಸರಳತೆ, ಸಜ್ಜನಿಕೆಗೆ ಹೆಸರಾದ ಸಾಗರ್ ಅವರು ಉತ್ತಮ ವಾಗ್ಮಿ. ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಪ್ರಮುಖರು ಕೋರಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net