

ಬೀದರ್: ಇಲ್ಲಿನ ನೌಬಾದ್ ಬಳಿಯ ಭಾಲ್ಕಿ ರಸ್ತೆಯಲ್ಲಿರುವ ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮದಲ್ಲಿ ರಂಭಾಪುರಿ ಜಗದ್ಗುರು ದಿವ್ಯ ಸಾನ್ನಿಧ್ಯದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ನೂತನ ಸಂಸದ, ವಿಧಾನ ಪರಿಷತ್ ಸದಸ್ಯರಿಗೆ ಸನ್ಮಾನ ಸಮಾರಂಭ ಜು.18ರಂದು ಮಧ್ಯಾಹ್ನ 12ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಪುಣ್ಯಾಶ್ರಮದ ಟ್ರಸ್ಟಿ, ತಮಲೂರು ಆಶ್ರಮದ ಶ್ರೀ ಶಿವಾನಂದ ಶಿವಾಚಾರ್ಯ ಹೇಳಿದರು.
ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮ ಹಾಗೂ ಡಾ.ಎಸ್.ಎಸ್. ಸಿದ್ಧಾರಡ್ಡಿ ಫೌಂಡೇಷನ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅದ್ದೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಸಾನ್ನಿಧ್ಯ, ಶ್ರೀ ಹವಾ ಮಲ್ಲಿನಾಥ ಮಹಾರಾಜರು, ಶ್ರೀ ವಿರೂಪಾಕ್ಷ ಶಿವಾಚಾರ್ಯ, ಶ್ರೀ ಶಿವಲಿಂಗ ಶಿವಾಚಾರ್ಯ, ಶ್ರೀ ವೈಜಿನಾಥ ದೇಶಿಕೇಂದ್ರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದಾರೆ. ಸಂಸದ ಸಾಗರ್ ಖಂಡ್ರೆ ಉದ್ಘಾಟಿಸುವರು ಎಂದು ತಿಳಿಸಿದರು.
ಸಂಸದ ಖಂಡ್ರೆ, ವಿಧಾನ ಪರಿಷತ್ ನೂತನ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಎಂ.ಜಿ ಮುಳೆ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಚ್.ಕೆಇ ಸೊಸೈಟಿ ಆಡಳಿತ ಮಂಡಳಿ ಸದಸ್ಯ ಡಾ.ರಜನೀಶ್ ವಾಲಿ ಅವರನ್ನು ಸನ್ಮಾನಿಸಲಾಗುವುದು. ಸಿದ್ಧಾರಡ್ಡಿ ಫೌಂಡೇಷನ್ ಗೌರವಾಧ್ಯಕ್ಷೆ ಡಾ.ಗುರಮ್ಮ ಸಿದ್ಧಾರಡ್ಡಿ, ಶಿವಶರಣಪ್ಪ ಸೀರಿ, ವೈಜಿನಾಥ ಕಮಠಾಣೆ, ಚನ್ನಬಸವ ಬಳತೆ ಇತರರು ಪಾಲ್ಗೊಳ್ಳುವರು ಎಂದರು.
ಪುಣ್ಯಾಶ್ರಮದ ಮುಖ್ಯಸ್ಥ ವೇದಮೂರ್ತಿ ಷಣ್ಮುಖಯ್ಯ ಸ್ವಾಮಿ, ಪ್ರಮುಖರಾದ ಮಲ್ಲಿಕಾರ್ಜುನ ಚಿಕ್ಕಪೇಟ್, ಶ್ರೀಕಾಂತ ಸ್ವಾಮಿ ಸೋಲಪುರ, ಡಾ.ಪ್ರಭುಲಿಂಗ ಸ್ವಾಮಿ, ಕಾರ್ತಿಕ ಮಠಪತಿ ಇತರರಿದ್ದರು.