ಶಿಫಾರಸು ಜಾರಿ, ನೌಕರರ ಸಂತಸ

pandurang Beldar
Published on

ಬೀದರ್: ರಾಜ್ಯ ಸರ್ಕಾರ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ತೀರ್ಮಾನಿಸಿರುವುದಕ್ಕೆ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘ ಸಂತಸ ವ್ಯಕ್ತಪಡಿಸಿದೆ.
ನೌಕರರ ಬೇಡಿಕೆಗೆ ಸ್ಪಂದಿಸಿ 2022ರ ಜುಲೈ 1ರಿಂದ ಕಾಲ್ಪನಿಕ ವೇತನ ನಿಗದಿ ಹಾಗೂ ಆಯೋಗದ ಶಿಫಾರಸಿನ ಅನ್ವಯ ಶೇ 27.5 ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net