ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

Mahesh Rampure
Published on

ಬೀದರ್: ರಾಜ್ಯದಲ್ಲಿ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಬುದ್ಧಿಸ್ಟ್ ಎಜುಕೇಷನ್ ಅಂಡ್ ಚಾರಿಟಬಲ್ ಟ್ರಸ್ಟ್ ಒತ್ತಾಯಿಸಿದೆ.
ಟ್ರಸ್ಟ್ ಅಧ್ಯಕ್ಷ ಮಹೇಶ್ ರಾಂಪುರೆ ಅವರು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತರ ಮತ್ತು ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಅವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಲಕ್ಷಾಂತರ ಬೌದ್ಧರು ಇದ್ದಾರೆ. ಅವರ ಅಭಿವೃದ್ಧಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ನಿಗಮ ಸ್ಥಾಪನೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ನಿಗಮ ಸ್ಥಾಪಿಸುವ ದಿಸೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net