

ಬೀದರ್: ರಾಜ್ಯದಿಂದ ಆಯ್ಕೆಯಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದ ಬಜೆಟ್ನಲ್ಲಿ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಿಲ್ಲ ಹಳ್ಳಿಖೇಡ್(ಕೆ) ನಿವಾಸಿ ಉದಯಕುಮಾರ ವಾರದ್ ತಿಳಿಸಿದ್ದಾರೆ.
ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ಹಾಗೂ ಎನ್‌ಡಿಎ ಸರ್ಕಾರ ಇರುವ ರಾಜ್ಯಗಳಿಗೆ ಆದ್ಯತೆ ನೀಡಿ ಇತರ ರಾಜ್ಯಗಳನ್ನು ಕಡೆಗಣಿಸಿದ ಬಜೆಟ್ ತಾರತಮ್ಯದಿಂದ ಕೂಡಿದೆ. ದೇಶದ ಒಕ್ಕೂಟ ವ್ಯವಸ್ಥೆಗೆ ಇದು ವಿರುದ್ಧವಾಗಿದೆ ಎಂದು ಹೇಳಿದ್ದಾರೆ.