ರಾಜ್ಯದ ಹಿತ ಕಡೆಗಣಿಸಿದ ಬಜೆಟ್

Ravindrakumar Hasankar
Published on

ಬೀದರ್: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಮಧ್ಯಂತರ ಬಜೆಟ್ ನಲ್ಲಿ ರಾಜ್ಯದ ಹಿತವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ರಾಜ್ಯ ಎಸ್.ಸಿ., ಎಸ್.ಟಿ. ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯದಿಂದ ಐವರು ಕೇಂದ್ರ ಸಚಿವರಾಗಿದ್ದರೂ, ಬಜೆಟ್ ನಲ್ಲಿ ರಾಜ್ಯಕ್ಕೆ ಏನೇನೂ ಕೊಟ್ಟಿಲ್ಲ. ಸಚಿವರು ರಾಜ್ಯಕ್ಕೆ ಅನುಕೂಲ ಮಾಡಿಸಿಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರಕುಮಾರ ಹಾಸನಕರ್ ಆರೋಪಿಸಿದ್ದಾರೆ.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಮಹದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಆಪಾದಿಸಿದ್ದಾರೆ.
ಗಡಿ ಜಿಲ್ಲೆ ಬೀದರ್ ಗೆ ಯಾವುದೇ ಯೋಜನೆ ಘೋಷಿಸಿಲ್ಲ. ಎಸ್.ಸಿ, ಎಸ್.ಟಿ, ಅಲ್ಪಸಂಖ್ಯಾತರ ಅನುದಾನವನ್ನೂ ಕಡಿತ ಮಾಡಲಾಗಿದೆ ಎಂದು ದೂರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net