ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

chandrakanth Phulekar
Published on

ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ್ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್ ತಿಳಿಸಿದ್ದಾರೆ.
ಆಟೋ ಎಲೆಕ್ಟ್ರಿಷಿಯನ್-26 ಡೀಸೆಲ್ ಮೆಕ್ಯಾನಿಕ್-27, ಮೆಕ್ಯಾನಿಕಲ್ ಮೋಟಾರ್ ವಾಹನ-22 ಸ್ಥಾನಗಳಿಗೆ ಆಯಾ ವೃತ್ತಿಯಲ್ಲಿನ ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ತರಬೇತಿಗೆ ಆಯ್ಕೆ ಮಾಡಲಾಗುವುದು. ಆಸಕ್ತರು ಮೂಲ ದಾಖಲಾತಿಗಳೊಂದಿಗೆ ನಗರದ ಹಳೆಯ ಬಸ್ ನಿಲ್ದಾಣದಲ್ಲಿನ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಆ.21ರಂದು ಆಯೋಜಿಸಿದ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net