ತಂದೆ-ತಾಯಿ, ಗುರುವಿನ ಮರೆಯದಿರಿ

Arunodaya School
Published on

ಬೀದರ್: ಜೀವನದಲ್ಲಿ ಜನ್ಮ ನೀಡಿದ ತಂದೆ-ತಾಯಿ ಹಾಗೂ ವಿದ್ಯೆ ಕಲಿಸಿದ ಗುರುವನ್ನು ಎಂದೂ ಮರೆಯಬಾರದು ಎಂದು ಭಾರತೀಯ ಶಿಕ್ಷಣ ಮಂಡಲದ ಉತ್ತರ ಪ್ರಾಂತದ ಮಹಿಳಾ ಪ್ರಕಲ್ಪ ಪ್ರಮುಖ ಪ್ರತಿಭಾ ಚಾಮಾ ನುಡಿದರು.
ನಗರದ ಅರುಣೋದಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ಗುರು ವಂದನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗುರು ಕರುಣೆ ಇಲ್ಲದ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ. ಕಾರಣ, ಗುರುವಿನ ಮಾರ್ಗದರ್ಶನ ಬಹಳ ಅವಶ್ಯಕ ಎಂದು ತಿಳಿಸಿದರು.
ಮಂಡಲದ ಶಿಕ್ಷಕ ಪ್ರಕೋಷ್ಠದ ಸಂಚಾಲಕ ಬಸವರಾಜ ಸ್ವಾಮಿ ಮಾತನಾಡಿ, ಭಾರತೀಯ ಸಂಸ್ಕøತಿಯಲ್ಲಿ ಗುರುವಿಗೆ ಉನ್ನತ ಸ್ಥಾನವಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರ ಬಿರಾದಾರ ಮಾತನಾಡಿ, ಹರ ಮುನಿದರೆ ಗುರು ಕಾಯುವನು ಎಂಬ ಗಾದೆ ಗುರುವಿನ ಮಹತ್ವವನ್ನು ಬಿಂಬಿಸುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಮಾತನಾಡಿ, ಮಕ್ಕಳು ನಿತ್ಯ ಪಾಲಕರ ಪಾದಕ್ಕೆ ನಮಸ್ಕರಿಸಬೇಕು. ಒಳ್ಳೆಯ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ವಿಜಯಕುಮಾರ ಪಾಟೀಲ ಯರನಳ್ಳಿ ಮಾತನಾಡಿ, ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುತ್ತಿರುವ ಶಾಲೆಯ ಕಾರ್ಯ ಶ್ಲಾಘನೀಯ ಎಂದರು.
ಎಫ್.ಪಿ.ಎ.ಐ. ಸುವರ್ಣ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮಕ್ಕಳು ಪಾಲಕರ ಪಾದಪೂಜೆ ಮಾಡಿದರು. ಗುರುಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.
ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಅಲ್ಕಾವತಿ ಹೊಸದೊಡ್ಡೆ ನಿರೂಪಿಸಿದರು. ನೀಲಮ್ಮ ಗಜಲೆ ಸ್ವಾಗತಿಸಿದರು.
ಭಾರತೀಯ ಶಿಕ್ಷಣ ಮಂಡಲದ ಉತ್ತರ ಪ್ರಾಂತ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕ ಹಾಗೂ ಋಷಿಕೇಶ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net