ಸಿದ್ದರಾಮಯ್ಯ ಜನಪ್ರಿಯತೆ ಸಹಿಸದ ಬಿಜೆಪಿ-ಜೆಡಿಎಸ್

Rajkumar Kandgule
Published on

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸದೇ ಬಿಜೆಪಿ ಹಾಗೂ ಜೆಡಿಎಸ್ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಹೊರೆಸುತ್ತಿವೆ ಎಂದು ಕಾಂಗ್ರೆಸ್ ಎಸ್.ಟಿ. ವಿಭಾಗದ ರಾಜ್ಯ ಕಾರ್ಯದರ್ಶಿ ರಾಜಕುಮಾರ ಕಂದಗೂಳೆ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ  ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ. ಜನ ಮೆಚ್ಚುವ ರೀತಿಯಲ್ಲಿ ಆಡಳಿತ ನೀಡುತ್ತಿದ್ದಾರೆ. ಅದರಿಂದಾಗಿಯೇ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಅಧಿಕ ಸ್ಥಾನಗಳಲ್ಲಿ ಗೆಲುವು ನೀಡಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿಯವರ ಅಧಿಕಾರ ಅವಧಿಯಲ್ಲಿ ಸಾಕಷ್ಟು ಹಗರಣಗಳು ನಡೆದಿದ್ದವು. ಅಧಿಕಾರದಲ್ಲಿದ್ದಾಗ ಅವುಗಳ ತನಿಖೆ ನಡೆಸದೇ ಇದೀಗ ಜನರ ದಾರಿ ತಪ್ಪಿಸಲು ತಲೆ ಬುಡವಿಲ್ಲದ ಮೂಡಾ ಹಗರಣ ಹೆಸರಲ್ಲಿ ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಸ್ಪದ. ಮುಖ್ಯಮಂತ್ರಿ ಅವರಿಗೆ ನೋಟಿಸ್ ಕೊಟ್ಟಿರುವುದು ರಾಜಕೀಯ ಷಡ್ಯಂತ್ರವಾಗಿದೆ ಎಂದು ತಿಳಿಸಿದ್ದಾರೆ.
ಕೂಡಲೇ ಮುಖ್ಯಮಂತ್ರಿ ಅವರಿಗೆ ನೀಡಿದ ನೋಟಿಸ್ ಹಿಂಪಡೆಯಬೇಕು. ಬಿಜೆಪಿ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಅವ್ಯಹಾರಗಳ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net