

ಬೀದರ್: ಶ್ರಾವಣ ನಿಮಿತ್ತ ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಆಗಸ್ಟ್ 10 ರಿಂದ ಸೆಪ್ಟೆಂಬರ್ 2 ರ ವರೆಗೆ ಪ್ರವಚನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ಜರುಗಲಿವೆ.
ಪ್ರತಿ ದಿನ ಬೆಳಿಗ್ಗೆ 6ಕ್ಕೆ ಸಿದ್ಧಾರೂಢರಿಗೆ ಅಭಿಷೇಕ, ಬೆಳಿಗ್ಗೆ 7ಕ್ಕೆ ಶ್ರೀಗಳ ಪಾದಪೂಜೆ ನಡೆಯಲಿದೆ. ಸಂಜೆ 6 ರಿಂದ 8 ರ ವರೆಗೆ ಡಾ. ಶಿವಕುಮಾರ ಸ್ವಾಮೀಜಿ ಅವರು ಶ್ರೀಮನ್ನಿಜಗುಣ ಶಿವಯೋಗಿಗಳ ‘ನೀತಿಕ್ರಿಯಾಚಾರ್ಯಸ್ಥಲ’ ಕುರಿತು ಪ್ರವಚನ ನೀಡಲಿದ್ದಾರೆ.
ಭಕ್ತರು ಶ್ರಾವಣ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಗುರು ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಕೋರಿದ್ದಾರೆ.