ಅಲೆಮಾರಿ ಮಕ್ಕಳಿಗೆ ಹಾಲು ವಿತರಣೆ

Vidyarthi Bandhutv Vedike Basava Panchami
Published on

ಬೀದರ್: ವಿದ್ಯಾರ್ಥಿ ಬಂಧುತ್ವ ವೇದಿಕೆ ವತಿಯಿಂದ ಬಸವ ಪಂಚಮಿ ಅಂಗವಾಗಿ ನಗರದ ನೌಬಾದ್‍ನಲ್ಲಿ ಅಲೆಮಾರಿ ಜನಾಂಗದ ಮಕ್ಕಳಿಗೆ ಉಚಿತ ಹಾಲು ವಿತರಿಸಲಾಯಿತು.
ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸುವ ಭಾಗವಾಗಿ ಮಕ್ಕಳಿಗೆ ಹಾಲು ವಿತರಿಸಿ ಬಸವ ಪಂಚಮಿ ಆಚರಿಸಲಾಗಿದೆ. ಹಾಲು ಬಡ ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನೀಗಿಸಲಿದೆ ಎಂದು ವೇದಿಕೆಯ ಜಿಲ್ಲಾ ಅಧ್ಯಕ್ಷ ರತ್ನದೀಪ ಕಸ್ತೂರೆ ಹೇಳಿದರು.
ವೈಜ್ಞಾನಿಕವಾಗಿ ಹಾವು ಹಾಲು ಕುಡಿಯುವುದಿಲ್ಲ. ಇದನ್ನು ಎಲ್ಲರೂ ಅರಿಯಬೇಕು. ಮೂಢ ಆಚರಣೆಗಳನ್ನು ಕೈಬಿಡಬೇಕು ಎಂದು ತಿಳಿಸಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರ ನೇತೃತ್ವದಲ್ಲಿ ಎಲ್ಲೆಡೆ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಮುಖಂಡ ಶರಣಪ್ಪ ಪಾಟೀಲ ಮಾತನಾಡಿದರು. ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ, ದಲಿತ ಸೇನೆ ಅಧ್ಯಕ್ಷ ಸುನೀಲ್ ಮಿತ್ರಾ, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಚಂದು ಡಿ.ಕೆ, ಅಭಿಷೇಕ ಮಾನಕರೆ, ಧಮ್ಮದೀಪ ಗೋಕಳೆ, ನಾಗೇಶ ನಾಗೂರೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net