ವಾಕಥಾನ್ ಯಶಸ್ಸಿಗೆ ಸಹಕಾರ ಬೇಕು

filter: 0; jpegRotation: 180; fileterIntensity: 0.000000; filterMask: 0;
filter: 0; jpegRotation: 180; fileterIntensity: 0.000000; filterMask: 0;
Published on

ಬೀದರ್: ಸ್ವಾತಂತ್ರ್ಯ ದಿನ ನಿಮಿತ್ತ ಜಿಲ್ಲಾಡಳಿತ ನಗರದಲ್ಲಿ ಆ.13ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಏಕತಾ ನಡಿಗೆ (ವಾಕಥಾನ್) ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ವಾಕಥಾನ್ ನಿಮಿತ್ತ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆ ಪ್ರಮುಖರ ಸಭೆ ನಡೆಸಿದ ಅವರು, ಅಂದು ಬೆಳಗ್ಗೆ 7ಕ್ಕೆ ಇಲ್ಲಿನ ಐತಿಹಾಸಿಕ ಕೋಟೆಯಿಂದ ನೆಹರು ಕ್ರೀಡಾಂಗಣವರೆಗೆ ಏಕತಾ ನಡಿಗೆ ನಡೆಯಲಿದೆ. ನಗರದ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆ ಪದಾಕಾರಿಗಳು, ಸಾರ್ವಜನಿಕರು ಹಾಗೂ ಅಧಿಕಾರಿಗಳು ತಮ್ಮ ಇಲಾಖೆ ಸಿಬ್ಬಂದಿ ಜತೆ ಭಾಗವಹಿಸಬೇಕು ಎಂದರು.
ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಿದಂತೆ ಕಾರ್ಯಕ್ರಮ ಆಯೋಜಿಸಿದ್ದು, 13ರಂದು ಬೆಳಗ್ಗೆ 6.30ಕ್ಕೆ ಮಕ್ಕಳನ್ನು ಕೋಟೆಗೆ ಕರೆತರಬೇಕು. 7ಕ್ಕೆ ಅಲ್ಲಿಂದ ನಡಿಗೆ ಆರಂಭವಾಗಿ ಮಹ್ಮದ್ ಗವಾನ್ ಮದರಸಾ, ಅಂಬೇಡ್ಕರ್ ವೃತ್ತ, ಶಿವಾಜಿ, ಹರಳಯ್ಯ ವೃತ್ತದ ಮಾರ್ಗವಾಗಿ ನೆಹರು ಕ್ರೀಡಾಂಗಣವರೆಗೆ ನಡೆಯಲಿದೆ. ಶಾಲಾ ವಾಹನಗಳಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕರೆತಂದು ಮತ್ತೆ ಕಾಲೇಜುಗಳಿಗೆ ತಲುಪಿಸುವ ಜವಾಬ್ದಾರಿ ಆಯಾ ಕಾಲೇಜಿನವರದು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಪ್ರಮುಖರಾದ ವಿರೂಪಾಕ್ಷ ಗಾದಗಿ, ಶಿವಶಂಕರ ಟೋಕರೆ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ್, ಡಿಡಿಪಿಯು ಚಂದ್ರಕಾಂತ ಶಹಾಬಾದಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕಿ ಸುರೇಖಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುವರ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net