

ಬೀದರ್: ನಗರದ ಚಿದಂಬರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆ ಹಾಗೂ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಿದಂಬರ ಶಿಕ್ಷಣ ಸಂಸ್ಥೆಯ ಸಹ ಕಾರ್ಯದರ್ಶಿ ಬಿ.ಜಿ. ಶೆಟಕಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಮಕ್ಕಳಿಂದ ನಡೆದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಸಭಿಕರ ಮನ ರಂಜಿಸಿದವು.
ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಸುಭಾಷ್ ಉಪ್ಪೆ, ಶಿವಶರಣಪ್ಪ ಸಾವಳಗಿ, ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ. ಚಂದ್ರಕಾಂತ ಹಳ್ಳಿ, ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಡಿ.ಎಂ. ಮದರಿ, ಸಿದ್ಧಾರೂಢ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಶಿವಕುಮಾರ ರಾಮಚಂದ್ರನ್, ಶಿವಕುಮಾರೇಶ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮ್ಯಾಗೇರಿ, ಸಿದ್ಧಾರೂಢ ಸ್ವಾಮಿ ಡಿ.ಎಲ್.ಇ.ಡಿಯ ಜ್ಯೋತಿ ಮತ್ತಿತರರು ಇದ್ದರು.
ನಾಗನಾಥ ಬಿರಾದಾರ ನಿರೂಪಿಸಿದರು. ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ನಾಗಪ್ಪ ಜಾನಕನೋರ ಸ್ವಾಗತಿಸಿದರು. ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ವಂದಿಸಿದರು.