

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಪ್ರತಿಭಟನೆ ಸಂಬಂಧ ಆಗಸ್ಟ್ 22 ರಂದು ಬೆಳಿಗ್ಗೆ 11ಕ್ಕೆ ನಗರದ ಗಾಂಧಿಗಂಜ್‍ನ ಕನಕ ಭವನದಲ್ಲಿ ಪೂರ್ವಭಾವಿ ಸಭೆ ಕರೆದಿದೆ.
ಪೂರ್ವಭಾವಿ ಸಭೆಯಲ್ಲಿ ರಾಜ್ಯಪಾಲರ ಕ್ರಮದ ವಿರುದ್ಧ ಹೋರಾಟದ ರೂಪುರೇಷೆ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ತಿಳಿಸಿದ್ದಾರೆ.
ಗೊಂಡ (ಕುರುಬ) ಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.