ಅರ್ಥಶಾಸ್ತ್ರದಲ್ಲಿ ಗರಿಷ್ಠ ಅಂಕ: ಇಬ್ಬರಿಗೆ ಪುರಸ್ಕಾರ

Gourshetty College PUC Economics Achievers Photo
Published on

ಬೀದರ್: 2024ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಅರ್ಥಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ಶ್ರೀ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಇಲ್ಲಿಯ ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಅರ್ಥಶಾಸ್ತ್ರ ಉಪನ್ಯಾಸಕ ಸೂರ್ಯಕಾಂತ ಐನಾಪುರ ಅವರು ತಮ್ಮ ತಂದೆ ಲಿಂ. ಮಾಣಿಕಪ್ಪ ಮಾಡಗೂಳ್ ಅವರ ಸ್ಮರಣಾರ್ಥವಾಗಿ ವಿದ್ಯಾರ್ಥಿನಿಯರಾದ ಸೌಂದರ್ಯ ಬಸವರಾಜ ಹಾಗೂ ಅಂಬಿಕಾ ಸಂಜುಕುಮಾರ ಅವರಿಗೆ ನಗದು, ಫಲಕ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಿದರು.
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿರುವುದು ಪ್ರಶಂಸನೀಯ ಎಂದು ಅಧ್ಯಕ್ಷತೆ ವಹಿಸಿದ್ದ ಚಿದಂಬರ ಶಿಕ್ಷಣ ಸಂಸ್ಥೆಯ ಸಹ ಕಾರ್ಯದರ್ಶಿ ಬಿ.ಜಿ. ಶೆಟಕಾರ್ ಹೇಳಿದರು.
ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಬಸವರಾಜ ಮ್ಯಾಗೇರಿ, ಡಾ. ಚಂದ್ರಕಾಂತ ಹಳ್ಳಿ, ನಾಗಪ್ಪ ಜಾನಕನೋರ, ರಾಮಚಂದ್ರ, ಜ್ಯೋತಿ ಪಾಟೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net