ಬೀದರ್: ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವೀರಶೆಟ್ಟಿ ಖ್ಯಾಮಾ ತಿಳಿಸಿದ್ದಾರೆ.
ಜಿಲ್ಲಾ ಘಟಕದ ಅಧ್ಯಕ್ಷನಾಗಿ ಹತ್ತು ವರ್ಷ ಸೇನೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಜಿಲ್ಲೆಯ ಜನರ ಬೆಂಬಲದೊಂದಿಗೆ ನಾನಾ ಹೋರಾಟ ಮಾಡಿರುವೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿರುವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.