

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬ್ಲಾಕ್ ಕಾಂಗ್ರೆಸ್ ಕಮಿಟಿ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಸಿಎಂ ವಿರುದ್ಧ ರಾಜ್ಯಪಾಲ ಧಾವರಚಂದ್ ಗೆಹಲೋತ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಹಿಂದ ನಾಯಕ ಸಿದ್ದರಾಮಯ್ಯ ಏಳಿಗೆ ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮಾಡುತ್ತಿವೆ. ರಾಜ್ಯಪಾಲರನ್ನು ಕೂಡಲೇ ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದರು.
ಮಾಜಿ ಸಂಸದ ನರಸಿಂಗರಾವ ಸೂರ್ಯವಂಶಿ, ಮಾಜಿ ಎಂಎಲ್ಸಿ ಅರವಿಂದಕುಮಾರ ಅರಳಿ, ನಗರಸಭೆ ಅಧ್ಯಕ್ಷ ಎಂ.ಡಿ. ಗೌಸೊದ್ದೀನ್, ಗ್ಯಾರಂಟಿ ಯೋಜನೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ, ಶಂಕರರಡ್ಡಿ ಚಿಟ್ಟಾ, ಸಂಜಯ ಜಾಗೀರದಾರ್, ವಿನೋದ ಅಪ್ಪದೆ, ಚಂದ್ರಶೇಖರ ಚನ್ನಶೆಟ್ಟಿ, ರಾಜಕುಮಾರ ಹಲಬರ್ಗೆ, ಇಮ್ರಾನ್ಖಾನ್, ಧನರಾಜ ಹಂಗರಿ, ಹಣಮಂತ ಮಲ್ಕಾಪುರೆ, ಪ್ರಶಾಂತ ದೊಡ್ಡಿ, ಬಾಬು ಪಾಸ್ವಾನ್, ಬಸವರಾಜ ಮಾಳಗೆ, ನರಸಪ್ಪ ಜಾನಕನೋರ್, ಡಿ.ಕೆ. ಸಂಗಮೇಶ ಇತರರಿದ್ದರು. ರಾಷ್ಟ್ರಪತಿಗೆ ಬರೆದ ಮನವಿಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.