ಪ್ರೌಢಶಾಲಾ ಶಿಕ್ಷಕರ ಸಂಘಕ್ಕೆ ನೇಮಕ

Santoshkumar Chaluva
Published on

ಬೀದರ್: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನೂತನ ಉಪಾಧ್ಯಕ್ಷರಾಗಿ ಸಂತೋಷಕುಮಾರ ಚಲುವಾ ಹಾಗೂ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಂಕರ ಬಾಪೂರೆ ಅವರನ್ನು ನೇಮಕ ಮಾಡಲಾಗಿದೆ.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಕ್ ಮಹೆಬೂಬ್ ಪಟೇಲ್ ಅವರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net