

ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ರಾಜ್ಯಪಾಲರ ವಿವೇಚನ ವಿಶೇಷ ಕೋಟಾದಡಿ ವಿಶೇಷ ಅನುದಾನವನ್ನು ಬೀದರ್ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ಮಂಜೂರು ಮಾಡಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಮನವಿಪತ್ರ ಸಲ್ಲಿಸಿದ ಅವರು, ದಕ್ಷಿಣ ಕ್ಷೇತ್ರದ ಆಣದೂರ ಗ್ರಾಮ ಹೊರವಲಯದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬೀದರ್ ಪ್ರಾದೇಶಿಕ ಕೇಂದ್ರದ ಆಡಳಿತ ಭವನ ಕಟ್ಟಡಕ್ಕೆ ಅನುದಾನ ಮಂಜೂರು ಮಾಡಬೇಕು ಹಾಗೂ ಕಮಠಾಣ ಹತ್ತಿರದ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಬೀದರ್ ವಿಶ್ವವಿದ್ಯಾಲಯಕ್ಕೆ ಅನುದಾನ ಮಂಜೂರು ಮಾಡಿ ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಹೆಚ್ಚಿನ ಶಕ್ತಿ ತುಂಬಬೇಕು ಎಂದು ಕೋರಿದ್ದಾರೆ.