

ಬೀದರ್: ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದ ಚಿಕ್ಕಪೇಟ್-ಹೈದರಾಬಾದ್ ರಿಂಗ್ ರಸ್ತೆಯ ಹೆಬ್ಬಾಳೆ ಕನ್ವೆನ್ಷನ್ ಹಾಲ್ ನಲ್ಲಿ ಭಾನುವಾರ ಬೆಳಗ್ಗೆ 10.30ಕ್ಕೆ ನೂತನ ಜನಪ್ರತಿನಿಧಿಗಳು ಹಾಗೂ ಸರ್ಕಾರದಿಂದ ವಿವಿಧ ಹುದ್ದೆಗೆ ನಾಮ ನಿರ್ದೇಶನಗೊಂಡ ಪ್ರಮುಖರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಜಿಲ್ಲಾ ಗ್ಯಾರಂಟಿ ಪ್ರಾಕಾರದ ಅಧ್ಯಕ್ಷ ಅಮೃತರಾವ ಚಿಮಕೋಡೆ ಅವರನ್ನು ಅಭಿನಂದಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಮ್ ಖಾನ್ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ರಾಜಶೇಖರ ಪಾಟೀಲ್, ಎಂಎಲ್ಸಿ ಭೀಮರಾವ ಪಾಟೀಲ್, ಮಾಜಿ ಶಾಸಕರಾದ ಅಶೋಕ ಖೇಣಿ, ವಿಜಯಸಿಂಗ್, ಅರವಿಂದಕುಮಾರ್ ಅರಳಿ ಇತರರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ಜಿಲ್ಲಾ, ಬ್ಲಾಕ್, ಮುಂಚೂಣಿ ಘಟಕಗಳ ಪದಾಕಾರಿಗಳು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.