

ಬೀದರ್: ನಗರದ ಸಿದ್ಧಾರೂಢ ಮಠದಲ್ಲಿ ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.
ರಾತ್ರಿ 10ಕ್ಕೆ ಭಜನೆ, ರಾತ್ರಿ 11ಕ್ಕೆ ಶ್ರೀ ಕೃಷ್ಣನ ಬಾಲಲೀಲೆ ಕುರಿತ ಪ್ರವಚನ, ರಾತ್ರಿ 12ಕ್ಕೆ ತೊಟ್ಟಿಲು ಕಾರ್ಯಕ್ರಮ ಜರುಗಲಿದೆ. ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಗುರು ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಕೋರಿದ್ದಾರೆ.