ವಿಶ್ವಕರ್ಮ ಜಯಂತಿ ಪೂರ್ವ ಸಿದ್ಧತಾ ಸಭೆ

Shivanand Vishwakarma
Published on

ಬೀದರ್: ವಿಶ್ವಕರ್ಮ ಜಯಂತಿ ಪ್ರಯುಕ್ತ ಜಿಲ್ಲಾ ವಿಶ್ವಕರ್ಮ ಸಮಾಜ ಸಮಿತಿ ವತಿಯಿಂದ ನಗರದ ಮೌನೇಶ್ವರ ಮಂದಿರದಲ್ಲಿ ಆಗಸ್ಟ್ 25 ರಂದು ಬೆಳಿಗ್ಗೆ 11ಕ್ಕೆ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ.
ಜಿಲ್ಲಾ ವಿಶ್ವಕರ್ಮ ಸಮಾಜ ಸಮಿತಿಯ ಅಧ್ಯಕ್ಷ ಮಹೇಶ ಪಂಚಾಳ ಹಾಗೂ ಉಪಾಧ್ಯಕ್ಷ ಪಾಂಡುರಂಗ ಪಂಚಾಳ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಾನಂದ ವಿಶ್ವಕರ್ಮ ತಿಳಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸೆಪ್ಟೆಂಬರ್ 17ರಂದು ನಗರದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಜರುಗಲಿದೆ. ಉಪನ್ಯಾಸ, ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿಸುವ ದಿಸೆಯಲ್ಲಿ  ಸಮಾಜದವರ ಸಲಹೆ ಪಡೆಯಲು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸಮಿತಿಯ ಜಿಲ್ಲಾ, ತಾಲ್ಲೂಕು, ಹೋಬಳಿ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಹಾಗೂ ಸಮಾಜದವರು ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net