ಸರ್ಕಾರದ ಕ್ರಮಕ್ಕೆ ಆಯೋಗ ಸ್ವಾಗತ

shashidhar Kosambe
Published on

ಬೀದರ್: ಅಪ್ರಾಪ್ತ ಬಾಲಕಿಯರು ಗರ್ಭಧರಿಸುವುದನ್ನು ತಡೆಗಟ್ಟಲು ವಿವಿಧ ಇಲಾಖೆಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.
ಬಾಲ ಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಸಂಬಂಧ ಸಿಎಂ ಅವರು ಎಲ್ಲ ಜಿಲ್ಲಾಧಿಕಾರಿ, ಜಿಪಂ ಸಿಇಒ ಅವರಿಗೆ ತಿಳಿಸಿದ್ದು, ಸಚಿವ ಸಂಪುಟ ಸಭೆಯಲ್ಲಿಯೂ ಈ ವಿಷಯ ಚರ್ಚಿಸಿರುವುದು ಶ್ಲಾಘನೀಯ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ. 18 ವರ್ಷದೊಳಗಿನ ಬಾಲಕಿಯರು ಗರ್ಭಧರಿಸಿದಾಗ ಅವರ ರಕ್ಷಣೆ, ವೈದ್ಯಕೀಯ ನೆರವು ಮತ್ತು ಕಾನೂನಾತ್ಮಕ ಕ್ರಮ ಜರುಗಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮಧ್ಯೆ ಸಮನ್ವಯದ ಇರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net