ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

photo
Published on

ಬೀದರ್: ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೋಮವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕ್ರೈಸ್ತ ಸಮಾಜದ ಹಿರಿಯ ಮುಖಂಡ ಎಸ್.ಪಿ. ರಾಜಶೇಖರ ಹೇಳಿದರು.
ದೇಶದಲ್ಲಿ ಮುಕ್ತ ವಾಕ್ ಸ್ವಾತಂತ್ರ್ಯ ಇರುವಾಗ ಒಬ್ಬರ ಧ್ವನಿ ಹತ್ತಿಕ್ಕಲು ಕಲ್ಲು ತೂರಾಟ, ದಾಂಧಲೆ, ಹಿಂಸಾತ್ಮಕ ಪ್ರವೃತ್ತಿಗೆ ಕೈ ಹಾಕುವುದು ಸರಿಯಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಡಿಸೋಜಾ ಈಗಾಗಲೆ ಪಕ್ಷ ಮತ್ತು ಸರ್ಕಾರಕ್ಕೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಕೋಟ್೯ ಮೆಟ್ಟಿಲೇರಿದೆ. ಡಿಸೋಜಾ ಮನೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹೋರಾಟ ನಡೆಯಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುನಿಲ್ ಬಚ್ಚನ್ ಮಾತನಾಡಿ, ಸೋಮವಾರ ಬೆಳಗ್ಗೆ 10ಕ್ಕೆ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಬಳಿಕ ಡಿಸಿ ಕಚೇರಿಗೆ ತೆರಳಿ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಗುವುದು. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದರು.
ಫಿಲಿಪ್ ದೊಡ್ಡಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net