ಹೆಚ್ಚೆಚ್ಚು ಸಸಿ ನೆಟ್ಟು ಪೋಷಣೆ ಮಾಡಿ

Pasu VV
Published on

ಬೀದರ್: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಭೂಮಿ ತಾಪಮಾನ ಕಡಿಮೆ ಮಾಡಲು ಹಾಗೂ ಹಸಿರು ಹೆಚ್ಚಿಸಿ ಶುದ್ಧ ಗಾಳಿ ಪಡೆಯಲು ಸಸಿಗಳನ್ನು ಹೆಚ್ಚೆಚ್ಚು ನೆಟ್ಟು ಪೋಷಣೆ ಮಾಡಬೇಕು ಎಂದು ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ. ವೀರಣ್ಣ ಹೇಳಿದರು.
ಕಮಠಾಣ ಬಳಿಯ ಪಶು ವಿಶ್ವವಿದ್ಯಾಲಯದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಡಿ ಆಯೋಜಿಸಿದ್ದ ತಾಯಿ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ಉದ್ಘಾಟಿಸಿದ ಅವರು, ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವುದು ಅತಿ ಅಗತ್ಯವಿದೆ ಎಂದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಸಸಿಗಳನ್ನು ನೆಡುವುದು ಮುಖ್ಯವಲ್ಲ, ಪೋಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ವಿವಿ ನಿರ್ದೇಶಕ ಡಾ.ಬಸವರಾಜ ಅವಟಿ, ಸಾಮಾಜಿಕ ಅರಣ್ಯ ಇಲಾಖೆ ಜಿಲ್ಲಾ ಅಧಿಕಾರಿ ಎ.ಬಿ. ಪಾಟೀಲ್, ಪಶು ವೈದ್ಯಕೀಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಎಂ.ಕೆ. ತಾಂಡಲೆ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಚನ್ನಪ್ಪಗೌಡ ಬಿರಾದಾರ್, ಕಾರ್ಯಕ್ರಮ ಅಧಿಕಾರಿಗಳಾದ ಡಾ.ಪೃಥ್ವಿರಾಜ್, ಡಾ.ಪ್ರವೀಣ ಎಂ.ಕೆ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುಜಿಬೊದ್ದೀನ್, ವಲಯ ಅರಣ್ಯಾಧಿಕಾರಿ ಪ್ರೇಮಶೇಖರ, ಉಪ ವಲಯ ಅರಣ್ಯಾಧಿಕಾರಿ ಬಾಲಾಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net