ವೈಷ್ಣವಿ ವಿಭಾಗಮಟ್ಟಕ್ಕೆ ಆಯ್ಕೆ

Arunodaya School photo - Copy
Published on

ಬೀದರ್: ಋಶಿಕೇಶ ಶಿಕ್ಷಣ ಸಂಸ್ಥೆಯ ಸಂಚಾಲಿತ ಇಲ್ಲಿಯ ಅರುಣೋದಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ದೀಪಕ್ ಭಾರತೀಯ ಸಂಸ್ಕøತಿ ಉತ್ಸವ ಪ್ರಯುಕ್ತ ಕಲಬುರಗಿಯಲ್ಲಿ ಹಮ್ಮಿಕೊಳ್ಳಲಾದ ವಿಭಾಗಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ನಗರದಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಅವರು ವಿಭಾಗಮಟ್ಟಕ್ಕೆ ಅರ್ಹತೆ ಗಳಿಸಿದರು.
ಸನ್ಮಾನ: ಶಾಲೆಯಲ್ಲಿ ಬುಧವಾರ ವಿದ್ಯಾರ್ಥಿನಿ ಹಾಗೂ ಅವರ ಪಾಲಕರನ್ನು ಸನ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net