ಸಂಗೀತ ರಸ ಸಂಜೆ 31ಕ್ಕೆ

Dilip Kadwad - Copy
Published on

ಬೀದರ್: ಜೀವನ ಪ್ರಕಾಶ ಕಲ್ಚರಲ್ ಆ್ಯಂಡ್ ವೆಲ್‍ಫೇರ್ ಸೊಸೈಟಿ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಗಸ್ಟ್ 31 ರಂದು ಸಂಜೆ 4ಕ್ಕೆ ‘ಹಮ್ ಏಕ್ ಹೈ’ ಘೋಷವಾಕ್ಯದಡಿ ಸಂಗೀತ ರಸ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಖ್ಯಾತ ಕಲಾವಿದರು ದೇಶ ಭಕ್ತಿ ಗೀತೆ ಹಾಗೂ ವೈವಿಧ್ಯಮಯ ನೃತ್ಯ ಪ್ರಸ್ತುತಪಡಿಸಲಿದ್ದಾರೆ. ಮಹಾರಾಷ್ಟ್ರದ ಸೋಲಾಪುರದ ಅಂತರರಾಷ್ಟ್ರೀಯ ಕಲಾವಿದರು ಲೈವ್ ಆರ್ಕೆಸ್ಟ್ರಾ ನಡೆಸಿಕೊಡಲಿದ್ದಾರೆ.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕಾರ್ಯಕ್ರಮ ಉದ್ಘಾಟಿಸುವರು. ಜೀವನ ಪ್ರಕಾಶ ಕಲ್ಚರಲ್ ಆ್ಯಂಡ್ ವೆಲ್‍ಫೇರ್ ಸೊಸೈಟಿ ಅಧ್ಯಕ್ಷ ದಿಲೀಪ್ ಕಾಡವಾದ ಅಧ್ಯಕ್ಷತೆ ವಹಿಸುವರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಎಸ್ತೇರ್ ದಿಲೀಪ್ ಪ್ರಾಸ್ತಾವಿಕವಾಗಿ ಮಾತನಾಡುವರು. ಜಿಲ್ಲೆಯ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಸಂಗೀತ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ದಿಲೀಪ್ ಕಾಡವಾದ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net