ಪಾಪನಾಶ ದೇವಸ್ಥಾನ ಅಭಿವೃದ್ಧಿಗೆ ಕ್ರಮ

Papnash Mandir
Published on

ಬೀದರ್: ಪಾಪನಾಶ ದೇಗುಲದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದ ಪಾಪನಾಶ ದೇವಸ್ಥಾನದಲ್ಲಿ ಕಾಯಕಯೋಗಿ ಫೌಂಡೇಷನ್ ವತಿಯಿಂದ ಶ್ರಾವಣ ನಿಮಿತ್ತ ಈಚೆಗೆ ಹಮ್ಮಿಕೊಂಡಿದ್ದ ಚಿಂತನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾಪನಾಶ ದೇವಸ್ಥಾನ ಐತಿಹಾಸಿಕ ದೇವಸ್ಥಾನಗಳಲ್ಲಿ ಒಂದಾಗಿದೆ. ವಿವಿಧೆಡೆಯಿಂದ ಬರುವ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ದೇವಸ್ಥಾನಕ್ಕೆ ಮೂಲಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಶ್ರಾವಣ ಪ್ರಯುಕ್ತ ಕಾಯಕ ಯೋಗಿ ಫೌಂಡೇಷನ್ ಕಾರ್ಯಕ್ರಮ ಹಮ್ಮಿಕೊಂಡು, ಅನ್ನ ದಾಸೋಹ ಮಾಡಿರುವುದು ಶ್ಲಾಘನೀಯ ಎಂದರು.
ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೇಮಳಖೇಡ ಹಿರೇಮಠದ ಡಾ. ರಾಜಶೇಖರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ಪೌರಾಡಳಿತ ಸಚಿವ ರಹೀಂಖಾನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಭಾಲ್ಕಿ ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಜ್ಯೋತಿಷ ಹಲಬರ್ಗೆ, ಮಹಾದೇವ ಖರಾಬೆ, ರಾಜಕುಮಾರ ಪಾಟೀಲ, ಜಗನ್ನಾಥ ಕರಂಜಿ, ನಾಗೇಶ ಬನ್ನಾಳೆ ಮತ್ತಿತರರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ರೇವಣಪ್ಪ ಮೂಲಗೆ ನಿರೂಪಿಸಿದರು. ಪವನ್ ಬಿರಾದಾರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net