ಒಂದು ಕೋಟಿ ರೂ.ವೆಚ್ಚದ ಕಾಮಗಾರಿಗೆ ಚಾಲನೆ

Kadwad
Published on

ಬೀದರ್: ತಾಲೂಕಿನ ಕಾಡವಾದ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಮೂರು ಕೊಠಡಿ, ಪ್ರಾಥಮಿಕ ಶಾಲೆಯಲ್ಲಿ ಎರಡು ಕೊಠಡಿ ಹಾಗೂ ಶೌಚಗೃಹ ನಿರ್ಮಾಣ ಸೇರಿ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಲಾಯಿತು.
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಅಭಿವೃದ್ಧಿಗೆ ಕೆಕೆಆರ್ ಡಿಬಿ ಯೋಜನೆಯಡಿ ಒಂದು ಕೋಟಿ ರೂ. ಅನುದಾನ ಒದಗಿಸಲಾಗಿದೆ. ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಸಂಪೂರ್ಣ ಹಳ್ಳಿಗಳಿಂದ ಕೂಡಿದ ದಕ್ಷಿಣ ಕ್ಷೇತ್ರದ ಪ್ರತಿ ಹಳ್ಳಿಯ ಜನರಿಗೆ ಸರ್ಕಾರದ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ರಸ್ತೆ, ನೀರು, ಸರ್ಕಾರಿ ಶಾಲೆಗೆ ಮೂಲಸೌಕರ್ಯ ಸೇರಿ ನಾನಾ ಕಾಮಗಾರಿಗೆ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.
ಇದೆ ವೇಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬೆಲ್ದಾಳೆ, ಪಠ್ಯಕ್ಕೆ ಆದ್ಯತೆ ನೀಡಿದಂತೆ ದೈಹಿಕ ಶಿಕ್ಷಣದ ಕಡೆಗೆ ವಿದ್ಯಾರ್ಥಿಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಕ್ರೀಡಾ ಆಸಕ್ತಿ ಬೆಳೆಸಬೇಕು. ಹಳ್ಳಿಗಳ ಮಕ್ಕಳು ರಾಜ್ಯ, ರಾಷ್ಟ್ರಮಟ್ಟದ ಸ್ಪಧರ್ೆಯಲ್ಲಿ ಪಾಲ್ಗೊಂಡು ಕೀರ್ತಿ ತರುವ ನಿಟ್ಟಿನಲ್ಲಿ ದೈಹಿಕ ಶಿಕ್ಷಕರು ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.
ಮುಖಂಡರಾದ ಶಿವಕುಮಾರ ಸ್ವಾಮಿ, ಮಾಣಿಕಪ್ಪ ಖಾಶೆಂಪುರ, ಘಾಳೆಪ್ಪ ಚಟ್ನಳ್ಳಿ, ಬಸವರಾಜ ಆಣದೂರೆ, ಮನ್ಮಥ ಮೀನಕೇರಾ, ಗುರುನಾಥ ಮೀನಕೇರಾ, ಬಸವರಾಜ ಹೂಗಾರ, ಶ್ರೀನಿವಾಸ ಕುಲಕರ್ಣಿ, ಮೋಹನ ಚೊಂಡಿ, ದತ್ತಾತ್ರೇಯ ಬುಕ್ಕಿಗರ್, ಸಂತೋಷ ಬರೂರೆ, ಲಕ್ಷ್ಮಣರಾವ ಸಿಂದಬಂದಗಿ ಹಾಗೂ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net