

ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಶ್ರಾವಣ ನಿಮಿತ್ತ ಹಮ್ಮಿಕೊಳ್ಳಲಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆ. 2 ರಂದು ಮುಕ್ತಾಯಗೊಳ್ಳಲಿವೆ.
ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸೋಮವಾರ ಬೆಳಿಗ್ಗೆ 6ಕ್ಕೆ ಸಿದ್ಧಾರೂಢರ ಮಹಾ ರುದ್ರಾಭಿಷೇಕ, ಬೆಳಿಗ್ಗೆ 7ಕ್ಕೆ ಶ್ರೀಗಳ ಪಾದಪೂಜೆ, ಸುವರ್ಣ ಕಿರೀಟ ಧಾರಣೆ, ಬೆಳಿಗ್ಗೆ 10ಕ್ಕೆ ಭಜನೆ, ಬೆಳಿಗ್ಗೆ 11ಕ್ಕೆ ಪ್ರವಚನ, ನಂತರ ಮಹಾ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಗುರು ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.