

ಬೀದರ್: ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸೆ.2ರಂದು (ಸೋಮವಾರ) ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಿರಂತರ ಮಳೆ ಬರುತ್ತಿರುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ಸೋಮವಾರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷಾ ಆದೇಶ ಹೊರಡಿಸಿದ್ದಾರೆ