ಕೆಎಎಸ್ ಮರು ಪರೀಕ್ಷೆಗೆ ಆಗ್ರಹ

Somnath Mudhool
Published on

ಬೀದರ್: ಕನ್ನಡದಲ್ಲಿ ತಪ್ಪು ಅನುವಾದ ಹಾಗೂ ಗೊಂದಲದ ಪ್ರಶ್ನೆಗಳ ಕಾರಣ ಕರ್ನಾಟಕ ಲೋಕಸೇವಾ ಆಯೋಗ ಈಚೆಗೆ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕೂಡಲೇ ರದ್ದುಪಡಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆಗ್ರಹಿಸಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟು 1.36 ಲಕ್ಷ ಅಭ್ಯರ್ಥಿಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕನ್ನಡದಲ್ಲಿ ಪರೀಕ್ಷೆ ಬರೆದಿದ್ದಾರೆ. ಅರ್ಥವಾಗದ ರೀತಿಯಲ್ಲಿ ಪ್ರಶ್ನೆಗಳನ್ನು ಕೊಟ್ಟಿರುವುದರಿಂದ ತೊಂದರೆ ಅನುಭವಿಸಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ನಡೆಯುವ ಯಾವುದೇ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮೊದಲು ಕನ್ನಡದಲ್ಲಿಯೇ ತಯಾರಿಸಬೇಕು. ನಂತರ ಅದನ್ನು ಇಂಗ್ಲಿಷ್‍ಗೆ ಅನುವಾದ ಮಾಡಬೇಕು. ಆದರೆ, ಮೊದಲು ಇಂಗ್ಲಿμïನಲ್ಲಿ ಸಿದ್ಧಪಡಿಸಿ, ನಂತರ ಕನ್ನಡಕ್ಕೆ ಭಾಷಾಂತರ ಮಾಡಿಸುತ್ತಿರುವುದು ಅವೈಜ್ಞಾನಿಕ ಹಾಗೂ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಎಎಸ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಮಾನ ಮಾಡಿರುವುದು ಖಂಡನೀಯ.ಆಯೋಗ ಕೂಡಲೇ ಕ್ಷಮೆಯಾಚಿಸಿ ತನ್ನ ತಪ್ಪನ್ನು ಸರಿಪಡಿಸಿಕೊಳ್ಳಬೇಕು. ಪರೀಕ್ಷೆಯನ್ನು ಅಸಿಂಧು ಎಂದು ಪರಿಗಣಿಸಿ ಮರು ಪರೀಕ್ಷೆ ನಡೆಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net