

ಬೀದರ್: ಕಲ್ಯಾಣ ಕರ್ನಾಟಕ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶಮರ್ಾ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಉತ್ಸವದ ಪೂರ್ವಭಾವಿ ಸಭೆ ನಡೆಸಿದ ಅವರು, ಸೆ.17ರಂದು ಬೆಳಗ್ಗೆ 7.45ಕ್ಕೆ ಸರ್ಕಾರಿ ಹಾಗೂ ಸಂಘ-ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಿದ ನಂತರ 8.15ಕ್ಕೆ ಬಸವೇಶ್ವರ ವೃತ್ತದಲ್ಲಿ ಸೇರಬೇಕು. ಅಲ್ಲಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಭಾವಚಿತ್ರದ ಮೆರವಣಿಗೆ ನೆಹರು ಕ್ರೀಡಾಂಗಣವರೆಗೆ ಸಾಗಿದ ಬಳಿಕ 9ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ ಎಂದರು.
ಮೂರು ಕಲಾ ತಂಡಗಳಿಂದ ಡೊಳ್ಳು ಕುಣಿತ, ತಮಟೆ ಮತ್ತು ಹೆಜ್ಜೆ ಮೇಳಗಳ ವ್ಯವಸ್ಥೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಬೇಕು. ಮೆರವಣಿಗೆ, ಕ್ರೀಡಾಂಗಣದಲ್ಲಿ ಕುಡಿಯುವ ನೀರು ನಗರಸಭೆ ಒದಗಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ, ಗ್ರಾಪಂ ಕಟ್ಟಡ ಹಾಗೂ ನಗರದ ಎಲ್ಲ ವೃತ್ತಗಳನ್ನು ಎರಡು ದಿನ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಡಿಡಿಪಿಯು ಚಂದ್ರಕಾಂತ ಶಾಬಾದಕರ್, ಡಿಡಿಪಿಐ ಸಲೀಮ್ ಪಾಷಾ, ನಗರಸಭೆ ಆಯುಕ್ತ ಶಿವರಾಜ ರಾಠೋಡ್, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಜಗನ್ನಾಥ ಹೆಬ್ಬಾಳೆ, ವಿರೂಪಾಕ್ಷ ಗಾದಗಿ ಇತರರಿದ್ದರು.